Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:9 - ಕನ್ನಡ ಸತ್ಯವೇದವು J.V. (BSI)

9 ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಥಿಯೋಪಿಯಾ ದೇಶದ ಜೆರಹನು ಆಸನ ಮೇಲೆ ಯುದ್ಧಮಾಡಲು ಬಂದನು. ಅವನೊಡನೆ ಹತ್ತು ಲಕ್ಷ ಸೈನಿಕರಿದ್ದರು; ಮೂನ್ನೂರು ರಥಗಳಿದ್ದವು. ಅವನ ಸೈನ್ಯವು ಮಾರೇಷದ ತನಕ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:9
12 ತಿಳಿವುಗಳ ಹೋಲಿಕೆ  

ಕೂಷ್ಯಲೂಬ್ಯರ ಸೈನ್ಯವು ಅಪರಿವಿುತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೋ! ನೀನು ಯೆಹೋವನ ಮೇಲೆ ಆತುಕೊಂಡದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.


ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಭತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ;


ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.


ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು; ಇಸ್ರಾಯೇಲಿನ ಮಹಿಮೆಯವರು ಅದುಲ್ಲಾವಿುಗೆ ಸೇರುವರು.


ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ವಿುತ್ರರಾಜ್ಯದವರು, ಇವರೆಲ್ಲಾ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.


ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಕೇಳಿ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ


ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ವೇಗವುಳ್ಳ ದೂತರೇ, ಉನ್ನತವಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.


ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು