2 ಪೂರ್ವಕಾಲ ವೃತ್ತಾಂತ 15:12 - ಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ಅವರು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪಿತೃಗಳ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದಲ್ಲದೆ, ಅವರು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಭಕ್ತರಾಗಿರುವೆವೆಂದು ಪ್ರಮಾಣಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ ಅಧ್ಯಾಯವನ್ನು ನೋಡಿ |
ನೀವೆಲ್ಲರೂ ಈ ಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವದಕ್ಕೆ ಕಾರಣವೇನಂದರೆ - ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆಯೂ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ವಾಗ್ದಾನಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವದಕ್ಕೋಸ್ಕರ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ; ನೀವು ಅದಕ್ಕೆ ಸೇರುವದಕ್ಕಾಗಿ ಕೂಡಿಬಂದಿದ್ದೀರಿ.