Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:14 - ಕನ್ನಡ ಸತ್ಯವೇದವು J.V. (BSI)

14 ತುತೂರಿಕೊಂಬುಗಳನ್ನೂದಿಸಿ ದೊಡ್ಡ ಆರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತುತ್ತೂರಿ ಕೊಂಬುಗಳನ್ನು ಊದಿಸಿ, ದೊಡ್ಡ ಘೋಷಣೆಗಳೊಡನೆ, ವಾಗ್ದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಮೇಲೆ ಆಸನೂ ಅವನ ಜನರೂ ದೇವರಿಗೆ ಪ್ರಮಾಣಮಾಡಿ ಸಂತೋಷದಿಂದ ಹರ್ಷಧ್ವನಿ ಮಾಡಿದರು. ಅಲ್ಲದೆ ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮಹಾಶಬ್ದದಿಂದಲೂ, ಆರ್ಭಟದಿಂದಲೂ, ತುತೂರಿಗಳ ಶಬ್ದದಿಂದಲೂ, ಕೊಂಬುಗಳ ಶಬ್ದದಿಂದಲೂ ಯೆಹೋವ ದೇವರ ಮುಂದೆ ಆಣೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:14
9 ತಿಳಿವುಗಳ ಹೋಲಿಕೆ  

ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯುವದಾಗಿ ಆಣೆಯಿಟ್ಟು ಪ್ರಮಾಣಮಾಡಿದರು. ಹೇಗಂದರೆ -


ಇದಲ್ಲದೆ ನನ್ನ ಉಡಿಲನ್ನು ಝಾಡಿಸಿ ಅವರಿಗೆ - ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ ಸ್ವಾಸ್ತ್ಯದಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಉಡಿಲಿನಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಕೂಡಲೆ ಸಭೆಯವರೆಲ್ಲಾ ಹಾಗೆಯೇ ಆಗಲಿ ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಕೊಂಡರು.


ತಮ್ಮಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲುವೆವೆಂದೂ


ಈ ಪ್ರಮಾಣದ ನಿವಿುತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾಕಡೆಗಳಲ್ಲಿಯೂ ಸಮಾಧಾನವನ್ನನುಗ್ರಹಿಸಿದನು.


ತುತೂರಿಗಳನ್ನೂ ಕೊಂಬನ್ನೂ ಊದುತ್ತಾ ಯೆಹೋವರಾಜನಿಗೆ ಜಯಘೋಷಮಾಡಿರಿ.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ನ್ಯಾಯವಿಧಿಗಳನ್ನೂ ವಿವರಿಸಲು ಜನರೆಲ್ಲರು - ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು ಎಂದು ಒಗ್ಗಟ್ಟಾಗಿ ಉತ್ತರ ಕೊಟ್ಟರು.


ತರುವಾಯ ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ - ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗಿರುವೆವು ಅಂದರು.


ಅದಕ್ಕೆ ಜನರು - ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತಾ ಆತನ ಮಾತನ್ನು ಕೇಳುವೆವು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು