2 ಪೂರ್ವಕಾಲ ವೃತ್ತಾಂತ 15:2 - ಕನ್ನಡ ಸತ್ಯವೇದವು J.V. (BSI)2 ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.