Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:3 - ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರಿಗೆ ಬಹುಕಾಲದವರೆಗೆ ನಿಜವಾದ ದೇವರೂ ಬೋಧಿಸುವ ಯಾಜಕರೂ ಧರ್ಮಶಾಸ್ತ್ರವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಹಳಕಾಲದ ತನಕ ಇಸ್ರೇಲರಲ್ಲಿ ನಿಜವಾದ ದೇವರಿರಲಿಲ್ಲ; ಬೋಧಕನಿರಲಿಲ್ಲ; ಧರ್ಮಶಾಸ್ತ್ರವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:3
22 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ - ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು.


ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ನಾನು ದೇವರ ನೇಮವಿಲ್ಲದವನಲ್ಲ, ಕ್ರಿಸ್ತ ನಿಯಮಕ್ಕೊಳಗಾದವನೇ; ಆದರೂ ನಿಯಮವಿಲ್ಲದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಯೆಹೋವನು ಆರೋನನಿಗೆ - ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ಇದು ನಿನಗೂ ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತವಿಧಿ.


ಇವನು ತನ್ನ ಆಳಿಕೆಯ ಮೂರನೆಯ ವರುಷದಲ್ಲಿ ತನ್ನ ಸರದಾರರಾದ ಬೆನ್ಹೈಲ್, ಓಬದ್ಯ, ಜೆಕರ್ಯ, ನೆತನೇಲ್, ಮೀಕಾಯ ಇವರನ್ನೂ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತಿವೆ; ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಸರದಾರರೂ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಧರ್ಮೋಪದೇಶವೇ ಕಾಣೆ; ಅದರ ಪ್ರವಾದಿಗಳಿಗೆ ಕೂಡಾ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು