Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:11 - ಕನ್ನಡ ಸತ್ಯವೇದವು J.V. (BSI)

11 ಆಸನ ಪೂರ್ವೋತ್ತರಚರಿತ್ರೆಯು ಯೆಹೂದ ಮತ್ತು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಸನ ಪೂರ್ವೋತ್ತರ ಚತರಿತ್ರೆಯನ್ನು ಯೆಹೂದ ಮತ್ತು ಇಸ್ರಯೇಲ್ ರಾಜರ ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಸನು ಪ್ರಾರಂಭದಿಂದ ಕೊನೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಯೆಹೂದ ಮತ್ತು ಇಸ್ರೇಲ್ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಸನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಯೆಹೂದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:11
11 ತಿಳಿವುಗಳ ಹೋಲಿಕೆ  

ಅವನ ಪೂರ್ವೋತ್ತರವೃತ್ತಾಂತವೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.


ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ - ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.


ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗನಾದ ಯೆಶಾಯನ ದರ್ಶನಗ್ರಂಥದಲ್ಲಿಯೂ ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜಗ್ರಂಥದಲ್ಲಿಯೂ ಬರೆದಿರುತ್ತವೆ.


ಯೋತಾಮನ ಉಳಿದ ಚರಿತ್ರೆಯೂ ಅವನ ಯುದ್ಧಗಳೂ ಪ್ರವರ್ತನೆಗಳೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.


ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.


ಅವನ ಉಳಿದ ಪೂರ್ವೋತ್ತರಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜರ ಗ್ರಂಥದಲ್ಲಿ ಬರೆದಿರುತ್ತದೆ.


ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆದಿರುತ್ತದೆ.


ರೆಹಬ್ಬಾಮನ ಪೂರ್ವೋತ್ತರಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಿಯಾದ ಇದ್ದೋ ಎಂಬವರ ಚರಿತ್ರೆಗಳ ವಂಶಾವಳಿಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯು ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆ, ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.


ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು