Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:12 - ಕನ್ನಡ ಸತ್ಯವೇದವು J.V. (BSI)

12 ಅವನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಅವನ ಕಾಲುಗಳಿಗೆ ಬಹುಕಠಿಣವಾದ ರೋಗವುಂಟಾಯಿತು. ಈ ರೋಗದಲ್ಲಿಯೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಸರ್ವೇಶ್ವರನ ಸಹಾಯವನ್ನು ಕೋರಲಿಲ್ಲ; ವೈದ್ಯರ ಸಹಾಯವನ್ನು ಮಾತ್ರ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರ್ಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಆಸನು ತನ್ನ ಆಳಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. ಅವನ ರೋಗವು ಅತಿಘೋರವಾಯಿತು. ಆದರೆ ಅವನು ತನ್ನ ರೋಗದಲ್ಲಿ ಯೆಹೋವ ದೇವರನ್ನು ಹುಡುಕದೆ, ವೈದ್ಯರನ್ನು ಹುಡುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:12
15 ತಿಳಿವುಗಳ ಹೋಲಿಕೆ  

ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಯೆಹೋವನು ಅವನನ್ನು ಕೊಲ್ಲಿಸಿ ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.


ಆಕೆಯು ಅನೇಕ ವೈದ್ಯರಿಂದ ಬಹು ಕಷ್ಟವನ್ನು ಅನುಭವಿಸಿ ಕೈಯಲ್ಲಿದ್ದದ್ದನ್ನೆಲ್ಲಾ ಕಳಕೊಂಡರೂ ರೋಗವು ಹೆಚ್ಚುತ್ತಾ ಬಂದದ್ದೇ ಹೊರತು ಮತ್ತೇನು ಪ್ರಯೋಜನವನ್ನೂ ಹೊಂದಿರಲಿಲ್ಲ.


ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಆತನು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ನೀವಾದರೋ ಸುಳ್ಳನ್ನು ಮೆತ್ತುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥವೈದ್ಯರೇ.


ತರುವಾಯ ಅವನು ತನ್ನ ಸೇವಕರಾದ ವೈದ್ಯರಿಗೆ - ನನ್ನ ತಂದೆಯ ಶವವನ್ನು ಸುಗಂಧದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ ಎಂದು ಅಪ್ಪಣೆಕೊಡಲು ಅವರು ಹಾಗೆಯೇ ಮಾಡಿದರು.


ಅವನು ತನ್ನ ಆಳಿಕೆಯ ನಾಲ್ವತ್ತೊಂದನೆಯ ವರುಷದಲ್ಲಿ ತೀರಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು