Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:12 - ಕನ್ನಡ ಸತ್ಯವೇದವು J.V. (BSI)

12 ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದದೇಶದಲ್ಲಿ ಕೋಟೆಗಳನ್ನೂ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಜುದೇಯ ನಾಡಿನಲ್ಲಿ ಕೋಟೆಗಳನ್ನು ಮತ್ತು ಉಗ್ರಾಣದ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ದೊಡ್ಡ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋಷಾಫಾಟನು ಬರಬರುತ್ತಾ ಬಹಳ ಅಭಿವೃದ್ಧಿಯಾಗಿ ಯೆಹೂದದಲ್ಲಿ ಅರಮನೆಗಳನ್ನೂ, ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:12
13 ತಿಳಿವುಗಳ ಹೋಲಿಕೆ  

ಇದಲ್ಲದೆ ಅರಸನು ಧೈರ್ಯಗೊಂಡು ಅಲ್ಲಲ್ಲಿ ಬಿದ್ದುಹೋದ ಪೌಳಿಗೋಡೆಯನ್ನು ಜೀರ್ಣೋದ್ಧಾರಮಾಡಿಸಿ ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿ ದಾವೀದ ನಗರದ ವಿುಲ್ಲೋಕೋಟೆಯನ್ನು ಭದ್ರಪಡಿಸಿ ಅನೇಕಾಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ಇದಲ್ಲದೆ ಇವನು ಯೆಹೂದ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.


ಯೆಹೋಷಾಫಾಟನಿಗೆ ಬಹಳ ಧನಘನತೆಗಳುಂಟಾದವು. ಅವನು ಅಹಾಬನೊಡನೆ ಬೀಗತನಮಾಡಿ


ಯೆಹೋವನು ಇಸ್ರಾಯೇಲ್ಯರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲ್ಯರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.


ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಗಳಲ್ಲಿ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ಕೊಡುತ್ತಿದ್ದರು.


ಯೆಹೂದದ ಪಟ್ಟಣಗಳಲ್ಲಿ ದೊಡ್ಡ ಪದಾರ್ಥಸಂಗ್ರಹವೂ ಯೆರೂಸಲೇವಿುನಲ್ಲಿ ರಣವೀರರಾದ ಭಟರೂ ಇದ್ದರು.


ಅವನಿಗೆ ಇಳಕಲಿನ ಪ್ರದೇಶದಲ್ಲಿಯೂ ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳಿದ್ದದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದದರಿಂದ ಗುಡ್ಡ, ಫಲವತ್ತಾದ ಬೈಲು ಇವುಗಳಲ್ಲಿ ಹೊಲ ದ್ರಾಕ್ಷೇತೋಟಗಳ ಕೆಲಸಮಾಡುವವರನ್ನು ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು