Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:16 - ಕನ್ನಡ ಸತ್ಯವೇದವು J.V. (BSI)

16 ತರುವಾಯ ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಫೆಯಿಂದ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯ ಮಗನಾದ ಅಮಸ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಮಸ್ಯ - ಜಿಕ್ರಿಯ ಮಗನಾದ ಇವನು ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಛೆಯಿಂದ ತನ್ನನ್ನೇ ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಂಡಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಮಸ್ಯನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಮಸ್ಯನು ಜಿಕ್ರಿಯ ಮಗ. ಯೆಹೋವನ ಸೇವೆಮಾಡುವದಕ್ಕೆ ಅವನು ತನ್ನನ್ನು ಒಪ್ಪಿಸಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವನ ತರುವಾಯ ಯೆಹೋವ ದೇವರಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ 2,00,000 ಮಂದಿ ಪರಾಕ್ರಮಶಾಲಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:16
10 ತಿಳಿವುಗಳ ಹೋಲಿಕೆ  

ನಾನು ಇಸ್ರಾಯೇಲ್ ನಾಯಕರಲ್ಲಿಯೂ ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತೇನೆ; ಯೆಹೋವನನ್ನು ಕೊಂಡಾಡಿರಿ.


ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ಇಸ್ರಾಯೇಲ್ಯರಲ್ಲಿ ಸೇನಾನಾಯಕರು ಎದ್ದಿದ್ದಾರೆ; ಜನರು ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ರಣವೀರರ ಅಧಿಪತಿಯಾದ ಯೆಹೋಹಾನಾನ್;


ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕನೂ ರಣವೀರನೂ ಆದ ಎಲ್ಯಾದ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು