Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:19 - ಕನ್ನಡ ಸತ್ಯವೇದವು J.V. (BSI)

19 ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿರುವ ಇವರಲ್ಲದೆ ಕೋಟೆಕೊತ್ತಲಗಳುಳ್ಳ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿದ್ದ ಈ ಯೋಧರಲ್ಲದೆ ಕೋಟೆಕೊತ್ತಲಗಳಿದ್ದ ಬೇರೆ ಪಟ್ಟಣಗಳಲ್ಲಿಯೂ ಸೈನಿಕರಾಗಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಸೈನಿಕರೆಲ್ಲಾ ಯೆಹೋಷಾಫಾಟನ ಸೇವೆಮಾಡಿದರು. ಇವರಲ್ಲದೆ ಯೆಹೂದ ದೇಶದಲ್ಲೆಲ್ಲಾ ಇದ್ದ ಕೋಟೆಗಳಲ್ಲಿಯೂ ಸೈನಿಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅರಸನಿಂದ ಸಮಸ್ತ ಯೆಹೂದದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇದ್ದವರ ಹೊರತಾಗಿ, ಇವರು ಅರಸನ ಬಳಿಯಲ್ಲಿ ಸೇವೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:19
6 ತಿಳಿವುಗಳ ಹೋಲಿಕೆ  

ಇವನು ಯೆಹೂದದ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳಲ್ಲಿಯೂ ಸೈನ್ಯವನ್ನಿರಿಸಿ ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ಕಿತ್ತುಕೊಂಡಿದ್ದ ಎಫ್ರಾಯೀಮ್ಯರ ಪಟ್ಟಣದಲ್ಲಿಯೂ ಅಧಿಕಾರಿಗಳನ್ನು ನೇವಿುಸಿದನು.


ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದದೇಶದಲ್ಲಿ ಕೋಟೆಗಳನ್ನೂ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿಟ್ಟು ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.


ಈ ಪ್ರಕಾರ ಇವುಗಳನ್ನು ಅತ್ಯಧಿಕವಾಗಿ ಭದ್ರಪಡಿಸಿದನು.


ಇವನ ತರುವಾಯ ಒಂದು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧಸನ್ನದ್ಧರ ನಾಯಕನಾದ ಯೆಹೋಜಾಬಾದ್ ಇವರೇ.


ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನು ಬಾಗಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದ ನಗರದ ಹೊರಗಣ ಬಲು ಎತ್ತರವಾದ ಗೋಡೆಯನ್ನು ಕಟ್ಟಿಸಿ ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಪತಿಗಳನ್ನಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು