Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:4 - ಕನ್ನಡ ಸತ್ಯವೇದವು J.V. (BSI)

4 ಇವನು ಇಸ್ರಾಯೇಲ್ಯರಂತೆ ನಡೆಯದೆ ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:4
21 ತಿಳಿವುಗಳ ಹೋಲಿಕೆ  

ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.


ಯೆಹೂದ್ಯರು ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲ್ಯರ ಪದ್ಧತಿಯನ್ನು ಅನುಸರಿಸಿದದರಿಂದ


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇಸ್ರಾಯೇಲ್ಯರು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಫೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಸುಡುವದಕ್ಕಾಗಿ ಅದರ ಮೆಟ್ಲುಗಳನ್ನು ಹತ್ತುತ್ತಿರುವಾಗ.


(ಇದು ಪಾಪಕ್ಕೆ ಕಾರಣವಾಯಿತು.) ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು.


ಇವನು ಬಾಳ್‍ದೇವರುಗಳನ್ನು ಅವಲಂಬಿಸದೆ ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಇವನ ಸಂಗಡ ಇದ್ದನು.


ಹೀಗಿರಲು ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ - ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು. ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿಯೂ ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿಯೂ ನಡೆಯಲಿಲ್ಲ;


ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ವಧಿಸಿ - ಇವನು ಯೆಹೋವನ ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಾಗಿರುತ್ತಾನಲ್ಲವೇ ಅಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.


ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವದಾದರೆ


ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.


ಅವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು