2 ಪೂರ್ವಕಾಲ ವೃತ್ತಾಂತ 17:6 - ಕನ್ನಡ ಸತ್ಯವೇದವು J.V. (BSI)6 ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದದೇಶದಲ್ಲಿದ್ದ ಪೂಜಾಸ್ಥಳಗಳನ್ನೂ ಅಶೇರವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇವನು ಸರ್ವೇಶ್ವರನ ಮಾರ್ಗದಲ್ಲಿ ನಡೆದು, ಧೈರ್ಯದಿಂದ ಜುದೇಯ ನಾಡಿನಲ್ಲಿದ್ದ ಪೂಜಾಸ್ಥಳಗಳನ್ನೂ ಆಶೇರ ವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.