Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:1 - ಕನ್ನಡ ಸತ್ಯವೇದವು J.V. (BSI)

1 ಯೆಹೋಷಾಫಾಟನಿಗೆ ಬಹಳ ಧನಘನತೆಗಳುಂಟಾದವು. ಅವನು ಅಹಾಬನೊಡನೆ ಬೀಗತನಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋಷಾಫಾಟನಿಗೆ ಧನಘನತೆ ಬಹಳವಾಗಿತ್ತು. ಅವನು ಆಹಾಬನೊಡನೆ ಬೀಗತನಮಾಡಿ ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರಿಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಷಾಫಾಟನಿಗೆ ಅತ್ಯಧಿಕವಾದ ಐಶ್ವರ್ಯವೂ ಘನತೆಯೂ ಇದ್ದವು. ಅವನು ಅರಸನಾದ ಅಹಾಬನೊಂದಿಗೆ ತನ್ನ ಮದುವೆಯ ಮೂಲಕ ಸಂಬಂಧ ಬೆಳೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಷಾಫಾಟನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಗಿರುವಾಗ, ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:1
17 ತಿಳಿವುಗಳ ಹೋಲಿಕೆ  

ಆದದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದದರಿಂದ ಇವನ ಧನಘನತೆಗಳು ಹೆಚ್ಚಾದವು.


ಇವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್‍ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ನೀವು ಕ್ರಿಸ್ತನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಾಗಬೇಡಿರಿ. ಧರ್ಮಕ್ಕೂ ಅಧರ್ಮಕ್ಕೂ ಜೊತೆಯೇನು?


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.


ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದದೇಶದಲ್ಲಿ ಕೋಟೆಗಳನ್ನೂ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಫಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಮೂರು ವರುಷಗಳವರೆಗೆ ಇಸ್ರಾಯೇಲ್ಯರಿಗೂ ಅರಾಮ್ಯರಿಗೂ ಯುದ್ಧ ನಡೆಯಲಿಲ್ಲ.


ಇವನ ಉಳಿದ ಚರಿತ್ರೆಯೂ ಇವನು ಯುದ್ಧಗಳಲ್ಲಿ ನಡಿಸಿದ ಶೂರ ಕೃತ್ಯಗಳ ವಿವರವೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನೂ ಬಹುದುರಾಚಾರಿಯೂ ಆದ ಅಹಜ್ಯನೊಡನೆ ಒಡಂಬಡಿಕೆಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು