Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:26 - ಕನ್ನಡ ಸತ್ಯವೇದವು J.V. (BSI)

26 ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕು ಎಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ನಾನು, ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸರು ಹೇಳಿದ್ದಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರಿಗೆ “ಮೀಕಾಯೆಹುವನ್ನು ಸೆರೆಮನೆಗೆ ಹಾಕಿ. ನಾನು ಯುದ್ಧದಿಂದ ಸುರಕ್ಷಿತವಾಗಿ ಹಿಂತಿರುಗುವ ತನಕ ಬರಿ ರೊಟ್ಟಿ ಮತ್ತು ನೀರನ್ನು ಮಾತ್ರ ಅವನಿಗೆ ಕೊಡಿ ಎಂದು ಅರಸನು ಆಜ್ಞಾಪಿಸುತ್ತಾನೆ ಎಂದು ಹೇಳಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ’ ಎಂದು ತಿಳಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:26
23 ತಿಳಿವುಗಳ ಹೋಲಿಕೆ  

ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.


ಮತಾಭಿಮಾನದಿಂದ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಪಟ್ಟಣದ ಕಾವಲಿನಲ್ಲಿಟ್ಟರು.


ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ಆದರೆ ಫರಿಸಾಯರು ಅದನ್ನು ಕೇಳಿ - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೇ ಹೊರತು ಬೇರೆ ರೀತಿಯಿಂದ ಬಿಡಿಸುವದಿಲ್ಲ ಅಂದರು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.


ಕರ್ತನು ಕಷ್ಟವನ್ನೂ ಶ್ರಮವನ್ನೂ ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ;


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು; ಜ್ಞಾನಹೀನನು ಸೊಕ್ಕೇರಿ ಭಯವನ್ನು ಲಕ್ಷಿಸನು.


ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು.


ರೋದನವೇ ಅವರ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಮಾಡಿದಿ.


ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವದರಿಂದ ಅವನ ಗ್ರಹಿಕೆಗೆ ಬರುವದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರ ಮಾಡುತ್ತಾನೆ.


ಆಗ ಅರಸನು ಅವನಿಗೆ - ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣ ಮಾಡಿಸಬೇಕು ಅನ್ನಲು


ಅಷ್ಟರಲ್ಲಿ ದಾವೀದನು - ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರಮಾಡಿದನು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು