Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:30 - ಕನ್ನಡ ಸತ್ಯವೇದವು J.V. (BSI)

30 ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಿರಿಯಾದವರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿಯಿಡಿ", ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅರಾಮ್ಯರ ರಾಜನು ತನ್ನ ರಥದ ಅಧಿಪತಿಗಳಿಗೆ, “ನೀವು ಜನರೊಂದಿಗೆ ಯುದ್ಧಮಾಡಬೇಡಿರಿ, ಅಧಿಕಾರಿಗಳ ಮತ್ತು ಸಾಮಾನ್ಯ ಸೈನಿಕರ ಗೊಡವೆಗೆ ಹೋಗಬೇಡಿರಿ. ಆದರೆ ನೀವು ಇಸ್ರೇಲಿನ ರಾಜನಾದ ಅಹಾಬನೊಂದಿಗೇ ಯುದ್ಧಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:30
8 ತಿಳಿವುಗಳ ಹೋಲಿಕೆ  

ತಮ್ಮಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲುವೆವೆಂದೂ


ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಇವರು ಬಾಗಿಲು ಯಾವದೆಂದು ತಿಳಿಯದೆ ಬೇಸರಗೊಂಡರು.


ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.


ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು