Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:34 - ಕನ್ನಡ ಸತ್ಯವೇದವು J.V. (BSI)

34 ಆದರೂ ಆ ದಿವಸ ಯುದ್ಧವು ಬಹು ಘೋರವಾಗಿದ್ದದರಿಂದ ಇಸ್ರಾಯೇಲ್ಯರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿದ್ದು ಸೂರ್ಯಾಸ್ತಮಾನವಾದಾಗ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಇಸ್ರಯೇಲರ ಅರಸನು ಸಾಯಂಕಾಲದವರೆಗೂ ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು.ಸೂರ್ಯಾಸ್ತಮಾನವಾದಾಗ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆ ದಿವಸ ಯುದ್ಧವು ಬಲುಘೋರವಾಗಿ ನಡೆಯಿತು. ಅಹಾಬನು ರಥದ ಕಂಬಕ್ಕೆ ಒರಗಿ ಸಂಜೆಯ ತನಕ ಹಾಗೆಯೇ ಅರಾಮ್ಯರ ಎದುರು ನಿಂತುಕೊಂಡಿದ್ದನು. ಸೂರ್ಯಾಸ್ತಮಾನವಾದಾಗ ಅಹಾಬನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನಾದ ಅಹಾಬನು ಸಾಯಂಕಾಲದವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು, ಸೂರ್ಯನು ಅಸ್ತಮಿಸಿದಾಗ ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:34
8 ತಿಳಿವುಗಳ ಹೋಲಿಕೆ  

ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವದು; ಮಂಗಳವು ಸಜ್ಜನರಿಗೆ ಪ್ರತಿಫಲವಾಗುವದು.


ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.


ಯೆಹೋವನು ತನ್ನ ಹತ್ತಿರ ನಿಂತವರನ್ನು - ಇಸ್ರಾಯೇಲ್ಯರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರಕೊಟ್ಟರು.


ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು.


ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.


ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು.


ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ತನ್ನ ಮನೆಗೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು