Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:4 - ಕನ್ನಡ ಸತ್ಯವೇದವು J.V. (BSI)

4 ಅನಂತರ ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅನಂತರ, “ಸರ್ವೇಶ್ವರನ ಸನ್ನಿಧಿಯಲ್ಲಿ ಈ ಬಗ್ಗೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋಷಾಫಾಟನು ಅಹಾಬನಿಗೆ, “ಆದರೆ ಮೊದಲು ನಾವು ಯೆಹೋವನನ್ನು ವಿಚಾರಿಸೋಣ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:4
13 ತಿಳಿವುಗಳ ಹೋಲಿಕೆ  

ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ದಾವೀದನು ಯೆಹೋವನನ್ನು - ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿ ಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟದರಿಂದ


ಅನಂತರ ದಾವೀದನು ಯೆಹೋವನನ್ನು - ನಾನು ಯೆಹೂದದೇಶದ ಯಾವದಾದರೊಂದು ಪಟ್ಟಣಕ್ಕೆ ಹೋಗಬಹುದೋ ಎಂದು ಕೇಳಲು ಆತನು - ಹೋಗಬಹುದು ಅಂದನು. ಅವನು ತಿರಿಗಿ - ಯಾವ ಊರಿಗೆ ಹೋಗಲಿ ಎಂದು ಕೇಳಿದ್ದಕ್ಕೆ - ಹೆಬ್ರೋನಿಗೆ ಹೋಗು ಎಂಬ ಉತ್ತರ ಸಿಕ್ಕಿತು.


ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.


ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು.


ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನಂದರೆ - ಇಸ್ರಾಯೇಲ್‍ದೇವರಾದ ಯೆಹೋವನು ಇಂತೆನ್ನುತ್ತಾನೆ,


ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ಪ್ರಶ್ನೆಕೇಳುವದಕ್ಕೆ ಬಂದಿರೊ? ನನ್ನ ಜೀವದಾಣೆ, ನಾನು ನಿಮಗೆ ಉತ್ತರಕೊಡುವದೇ ಇಲ್ಲ; ಇದು ಕರ್ತನಾದ ಯೆಹೋವನ ನುಡಿ.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ಇಸ್ರಾಯೇಲ್ಯರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು - ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೇಯಲ್ಲವೋ. ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು ಎಂದು ಉತ್ತರಕೊಟ್ಟು


ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ - ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು