Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:6 - ಕನ್ನಡ ಸತ್ಯವೇದವು J.V. (BSI)

6 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು - ಯೆಹೋವನ ಪ್ರವಾಧಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿರುವದಿಲ್ಲವೋ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿ ಇಲ್ಲವೇ?” ಎಂದು ಕೇಳಿದನು. ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಯೆಹೋಷಾಫಾಟನು, “ಈ ಪ್ರವಾದಿಗಳಲ್ಲದೆ ಬೇರೆ ಪ್ರವಾದಿಗಳಿಲ್ಲವೆ? ಅವರ ಮೂಲಕ ನಾವು ಯೆಹೋವನನ್ನು ಕೇಳೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:6
4 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ - ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗೆ ಹೇಳಬಾರದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು