Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:6 - ಕನ್ನಡ ಸತ್ಯವೇದವು J.V. (BSI)

6 ನೀವು ಹೇಗೆ ಕೆಲಸನಡಿಸುತ್ತೀರಿ ಎಂಬದರ ವಿಷಯ ನೋಡಿಕೊಳ್ಳಿರಿ. ನೀವು ನ್ಯಾಯತೀರಿಸುವದು ಮನುಷ್ಯರಿಗೋಸ್ಕರವಲ್ಲ, ಯೆಹೋವನಿಗೋಸ್ಕರವೇ. ನ್ಯಾಯವಿಚಾರಣೆ ನಡೆಯುವಾಗ ಆತನು ನಿಮ್ಮ ಮಧ್ಯದಲ್ಲಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರಿಗೆ, “ನೀವು ಹೇಗೆ ಕಾರ್ಯನಿರ್ವಹಿಸುತ್ತೀರಿ ಎಂಬುದರ ಬಗ್ಗೆ, ಎಚ್ಚರಿಕೆ! ನೀವು ನ್ಯಾಯ ನಿರ್ಣಯಿಸುವುದು ಮನುಷ್ಯರಿಗಾಗಿ ಅಲ್ಲ; ಸರ್ವೇಶ್ವರನಿಗಾಗಿ, ನ್ಯಾಯವಿಚಾರಣೆ ನಡೆಯುವಾಗ ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಅವರಿಗೆ, “ನೀವು ಮಾಡುವ ಕಾರ್ಯದಲ್ಲಿ ಜಾಗರೂಕರಾಗಿರಿ. ನೀವು ಯೆಹೋವನ ಪರವಾಗಿ ಜನರ ನ್ಯಾಯವನ್ನು ತೀರಿಸುವವರಾಗಿದ್ದೀರಿ. ನೀವು ನ್ಯಾಯತೀರಿಸುವಾಗ ಯೆಹೋವನು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನೀವು ಮಾಡುವುದನ್ನು ನೋಡಿಕೊಳ್ಳಿರಿ. ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಯೆಹೋವ ದೇವರಿಗೋಸ್ಕರ ನ್ಯಾಯ ತೀರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:6
10 ತಿಳಿವುಗಳ ಹೋಲಿಕೆ  

ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.


ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ಆದದರಿಂದ ನೋಡಿಕೋ; ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನಷ್ಟೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು ಎಂಬದೇ.


ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವಿಧಿಗಳನ್ನು ಜಾಗರೂಕತೆಯಿಂದ ಕೈಕೊಳ್ಳಿರಿ. ಹೀಗಿರಲಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನೇ ಹೊಂದಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಆತನನ್ನು ಸೇವಿಸಿರಿ ಎಂದು ಹೇಳಿ


ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ - ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು ಎಂದು ಹೇಳಲು


ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ಮಾಡಬೇಕೆಂದಿರುವದನ್ನು ಕುರಿತು ಎಚ್ಚರಿಕೆಯುಳ್ಳವರಾಗಿರ್ರಿ.


ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು