Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:1 - ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನು ಯೆಹೋವನ ಹೆಸರಿಗೋಸ್ಕರ ಆಲಯವನ್ನೂ ತನಗೋಸ್ಕರ ಅರಮನೆಯನ್ನೂ ಕಟ್ಟಿಸಬೇಕೆಂದು ಮನಸ್ಸುಳ್ಳವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನನು ಯೆಹೋವನಿಗೋಸ್ಕರ ಒಂದು ಆಲಯವನ್ನೂ ಮತ್ತು ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನನು ಸರ್ವೇಶ್ವರನ ಹೆಸರಿಗಾಗಿ ಒಂದು ಅರಮನೆಯನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವಾಲಯವನ್ನು ಕಟ್ಟಿ ದೇವರಿಗೆ ಘನತೆಯನ್ನು ಸಲ್ಲಿಸಲು ಸೊಲೊಮೋನನು ಯೋಜಿಸಿದನು. ಮಾತ್ರವಲ್ಲದೆ ತನಗೆ ವಾಸಿಸಲು ಒಂದು ಅರಮನೆಯನ್ನು ಕಟ್ಟಲೂ ಸಿದ್ಧತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೋಸ್ಕರ ಒಂದು ಆಲಯವನ್ನೂ, ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ಸೊಲೊಮೋನನು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:1
13 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ತಂದೆಯಾದ ದಾವೀದನಿಗೆ - ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು, ನಾನು ಅವನಿಗೆ ತಂದೆಯಾಗಿರುವೆನು; ಇಸ್ರಾಯೇಲ್ಯರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬದಾಗಿ ಹೇಳಿದನು.


ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಸಿದನಂತರ


ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್‍ಸಿಂಹಾಸನದ ಮೇಲೆ ಅರಸನಾಗಿ ಕೂತುಕೊಂಡು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿದೆನು;


ಆತನು ಅವನಿಗೆ - ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವದಕ್ಕೆ ಮನಸ್ಸುಮಾಡಿದ್ದು ಒಳ್ಳೇದೇ ಸರಿ.


ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಭಯಂಕರ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೆ ಹೋದರೆ


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ರಥಕ್ಕೆ ಆರುನೂರು ರೂಪಾಯಿಗಳಂತೆಯೂ ಕುದುರೆಗೆ ನೂರೈವತ್ತು ರೂಪಾಯಿಗಳಂತೆಯೂ ಕೊಟ್ಟು ರಥಗಳನ್ನೂ ಕುದುರೆಗಳನ್ನೂ ಐಗುಪ್ತದೇಶದಿಂದ ತರಿಸುತ್ತಿದ್ದರು. ಹೀಗೆಯೇ ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.


ಭೂಮ್ಯಾಕಾಶಗಳನ್ನುಂಟುಮಾಡಿದ ಇಸ್ರಾಯೇಲ್‍ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ ಜ್ಞಾನವಿವೇಕಗಳುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟದರಿಂದ ಆತನಿಗೆ ಸ್ತೋತ್ರವಾಗಲಿ.


ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಭತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು