Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:15 - ಕನ್ನಡ ಸತ್ಯವೇದವು J.V. (BSI)

15 ಈಗ ನನ್ನ ಒಡೆಯನು ತಾನು ಮಾತುಕೊಟ್ಟ ಮೇರೆಗೆ ಗೋದಿ ಜವೆಗೋದಿ ಎಣ್ಣೆ ದ್ರಾಕ್ಷಾರಸ ಇವುಗಳನ್ನು ತನ್ನ ದಾಸರಿಗೆ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಗ ನನ್ನ ಒಡೆಯರಾದ ತಾವು ಮಾತುಕೊಟ್ಟ ಮೇರೆಗೆ ಗೋದಿ, ಜವೆಗೋದಿ, ಎಣ್ಣೆ, ದ್ರಾಕ್ಷಾರಸ ಇವುಗಳನ್ನು ತನ್ನ ಸೇವಕರಿಗೆ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀನು ನನ್ನ ಸೇವಕರಿಗೆ ಆಹಾರವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೊಡುವ ಭರವಸೆ ನೀಡಿರುವೆ. ಆದ್ದರಿಂದ ದಯವಿಟ್ಟು ಇವುಗಳನ್ನು ಒದಗಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ, ಜವೆಗೋಧಿಯನ್ನೂ, ಎಣ್ಣೆಯನ್ನೂ, ದ್ರಾಕ್ಷಾರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:15
7 ತಿಳಿವುಗಳ ಹೋಲಿಕೆ  

ಮರಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ ಗೋದಿ, ಇಪ್ಪತ್ತು ಸಾವಿರ ಕೋರ್ ಜವೆಗೋದಿ, ಇಪ್ಪತ್ತು ಸಾವಿರ ಬತ್ ದ್ರಾಕ್ಷಾರಸ, ಇಪ್ಪತ್ತು ಸಾವಿರ ಬತ್ ಎಣ್ಣೆ ಇವುಗಳನ್ನು ಕೊಡುವೆನೆಂದು ಹೇಳಿಸಿದನು.


ಸೊಲೊಮೋನನಾದರೋ ಪ್ರತಿವರುಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀನು ಅವುಗಳನ್ನು ಯೆರೂಸಲೇವಿುಗೆ ತರಿಸಿಕೊಳ್ಳಬಹುದು ಎಂಬದಾಗಿ ಉತ್ತರಕೊಟ್ಟನು.


ಗತ್‍ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.


ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು