Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:16 - ಕನ್ನಡ ಸತ್ಯವೇದವು J.V. (BSI)

16 ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀನು ಅವುಗಳನ್ನು ಯೆರೂಸಲೇವಿುಗೆ ತರಿಸಿಕೊಳ್ಳಬಹುದು ಎಂಬದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:16
15 ತಿಳಿವುಗಳ ಹೋಲಿಕೆ  

ಗತ್‍ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.


ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸಬೇಕು; ಅವನು ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿ ಅದೆ ಅಂದನು.


ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ.


ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ - ತಡಮಾಡದೆ ನಮ್ಮ ತನಕ ಬರಬೇಕೆಂದು ಬೇಡಿಕೊಂಡರು.


ಈ ಸಂಗತಿಯು ಯೊಪ್ಪದಲ್ಲೆಲ್ಲಾ ತಿಳಿಯಬಂದು ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.


ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸದವರೆಗೂ ಇದ್ದನು.


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ಸಮೂಹಕ್ಕೋಸ್ಕರವೂ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಯಜ್ಞವೇದಿಗೋಸ್ಕರವೂ ಕಟ್ಟಿಗೆ ಒಡೆಯುವವರನ್ನಾಗಿಯೂ ನೀರು ತರುವವರನ್ನಾಗಿಯೂ ನೇವಿುಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಕೂಡಿಸುವದಕ್ಕೆ ಆಜ್ಞಾಪಿಸಿ ಅವರಲ್ಲಿದ್ದ ಕಲ್ಲು ಕುಟಿಗರನ್ನು ದೇವಾಲಯ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವದಕ್ಕೆ ನೇವಿುಸಿದನು.


ಇದಲ್ಲದೆ ಇಸ್ರಾಯೇಲ್ಯರಿಂದ ಸಂಹೃತರಾಗದೆ ಕಾನಾನ್ ದೇಶದಲ್ಲಿ ಉಳಿದ ಹಿತ್ತಿಯ ಅಮೋರಿಯ ಪೆರಿಜೀಯ ಹಿವ್ವಿಯ ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನೂ [ತನ್ನ ಕೆಲಸಕ್ಕಾಗಿ] ಬಿಟ್ಟಿ ಹಿಡಿದನು.


ಅವರು ಇಂದಿನವರೆಗೂ ಬಿಟ್ಟೀ ಕೆಲಸದವರಾಗಿರುತ್ತಾರೆ.


ಯೆಹೂದ್ಯರ ಸರ್ವಸಮೂಹದವರೂ ಯಾಜಕರೂ ಲೇವಿಯರೂ ಇಸ್ರಾಯೇಲ್‍ಪ್ರಾಂತಗಳಿಂದ ನೆರೆದುಬಂದವರೆಲ್ಲರೂ ಇಸ್ರಾಯೇಲ್ ಯೆಹೂದ ಪ್ರಾಂತಗಳಲ್ಲಿದ್ದ ಪ್ರವಾಸಿಗಳೂ ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು