2 ಪೂರ್ವಕಾಲ ವೃತ್ತಾಂತ 2:8 - ಕನ್ನಡ ಸತ್ಯವೇದವು J.V. (BSI)8 ಮತ್ತು ಲೆಬನೋನಿನಿಂದ ದೇವದಾರುಮರವನ್ನೂ ತುರಾಯಿಮರವನ್ನೂ ಸುಗಂಧದಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಂತೆಯೇ ಲೆಬನೋನಿನಿಂದ ದೇವದಾರು ಮರವನ್ನೂ ತುರಾಯಿಮರವನ್ನೂ ಸುಗಂಧದ ಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಕೆಲಸಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಲ್ಲದೆ ನನಗೆ ಲೆಬನೋನಿನಿಂದ ದೇವದಾರು, ತುರಾಯಿ ಮತ್ತು ಸುಗಂಧಮರಗಳನ್ನು ಕಳುಹಿಸಿಕೊಡು. ನಿನ್ನ ಸೇವಕರು ಲೆಬನೋನಿನ ಮರಗಳನ್ನು ಕತ್ತರಿಸುವುದರಲ್ಲಿ ನಿಪುಣರೆಂಬುದು ನನಗೆ ಗೊತ್ತಿದೆ. ನಿನ್ನ ಅನುಭವಸ್ಥ ಸೇವಕರಿಗೆ ಸಹಾಯ ಮಾಡಲು ನನ್ನ ಸೇವಕರೂ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ನೀನು ಇಲ್ಲಿಗೆ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ಲೆಬನೋನಿನಿಂದ ನನ್ನ ಬಳಿಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವಕರು ನಿಪುಣರಾಗಿದ್ದಾರೆ. ನನ್ನ ಸೇವಕರು ಅವರ ಸಂಗಡ ಇರುವರು. ಅಧ್ಯಾಯವನ್ನು ನೋಡಿ |