Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:1 - ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರೋಧವಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸ್ವಲ್ಪಕಾಲವಾದ ಮೇಲೆ ಮೋವಾಬ್ಯರು, ಅಮ್ಮೋನಿಯರು ಹಾಗು ಮೆಗೂನ್ಯರಲ್ಲಿ ಕೆಲವರು ಯೆಹೋಷಾಫಾಟನಿಗೆ ವಿರುದ್ಧ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಲಕಾಲದನಂತರ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನೊಂದಿಗೆ ಯುದ್ಧಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:1
15 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.


ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಅಹಂಕಾರದಂಭ ಗರ್ವೋದ್ರೇಕ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ. ಅವರು ಕೊಚ್ಚಿಕೊಳ್ಳುವದೆಲ್ಲಾ ಬರೀ ಬುರುಡೆಯೇ.


ಈ ಭಕ್ತಿಕಾರ್ಯಗಳಾದನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆಹಾಕಿದನು.


ಇಗೋ, ಯೆಹೋವನ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯಕಾರ್ಯ ಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದಕುಲಪ್ರಭುವೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನ ಲೇಖಕರು; ಧೈರ್ಯದಿಂದ ಕೆಲಸಮಾಡಿರಿ, ಯೆಹೋವನು ಸಜ್ಜನರ ಸಹಾಯಕನು ಎಂದು ಹೇಳಿದನು.


ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಪೆಕಹ ಎಂಬವರು ಯೆರೂಸಲೇವಿುನ ಮೇಲೆ ದಂಡೆತ್ತಿ ಬಂದರು. (ಅದನ್ನು ಜಯಿಸುವದಕ್ಕೆ ಆಗಲಿಲ್ಲ.)


ಅವನು ಯೆಹೂದದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇವಿುಸಿ ಅವರಿಗೆ -


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ [ಆ ಹಾಮ್ಯರ] ಪಾಳೆಯಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮಮಾಡಿದರು; ಮತ್ತು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಈಗ ಯಾರೂ ಉಳಿದಿರುವದಿಲ್ಲ.


ಈ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತಪ್ರದೇಶದವರನ್ನೂ ನೋಡು; ಇಸ್ರಾಯೇಲ್ಯರು ಐಗುಪ್ತದೇಶದಿಂದ ಬರುತ್ತಿದ್ದಾಗ ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ ಇವರನ್ನು ಸಂಹರಿಸದೆ ವಾರೆಯಾಗಿ ಹೋದರಲ್ಲಾ.


ಫಿಲಿಷ್ಟಿಯರೊಡನೆಯೂ ಗೂರ್ ಬಾಳಿನಲ್ಲಿರುವ ಅರಬಿಯರೊಡನೆಯೂ ಮೆಗೂನ್ಯರೊಡನೆಯೂ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯವು ದೊರೆಯಿತು.


ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯರೂ ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆಗಿರುವ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರೂ ರಣವೀರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು