Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:14 - ಕನ್ನಡ ಸತ್ಯವೇದವು J.V. (BSI)

14 ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ ಬೆನಾಯನ ಮೊಮ್ಮಗನೂ ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ಸಮೂಹದೊಳಗೆ ಆಸಾಫನ ವಂಶದವನೂ ಲೇವಿಯನೂ ಆದ ಯಹಜೀಯೇಲನ ಮೇಲೆ ಸರ್ವೇಶ್ವರನ ಆತ್ಮ ಇಳಿದು ಬಂದಿತು. ಇವನು ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಜೆಕರ್ಯನ ಮಗನಾದ ಯೆಹಜೀಯೇಲನ ಮೇಲೆ ಯೆಹೋವನ ಆತ್ಮನು ಬಂದನು. ಜೆಕರ್ಯನು ಬೆನಾಯನ ಮಗ. ಬೆನಾಯನು ಯೆಗೀಯೇಲನ ಮಗ. ಯೆಗೀಯೇಲನು ಮತ್ತನ್ಯನ ಮಗ. ಯೆಹಜೀಯೇಲನು ಲೇವಿಯನಾಗಿದ್ದನು ಮತ್ತು ಆಸಾಫನ ಸಂತತಿಯವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:14
11 ತಿಳಿವುಗಳ ಹೋಲಿಕೆ  

ಆಗ ಓಬೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದದರಿಂದ


ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು.


ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಿಬಂತು, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.


ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ ಇಗೋ, ಇದ್ದೇನೆ, ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನೂ ಬೆರಳಸನ್ನೆಯನ್ನೂ ಕೆಡುಕಿನ ನುಡಿಯನ್ನೂ ಹೋಗಲಾಡಿಸಿ


ಅವನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲ್ಯರು ಅವನಿಗೆ ಕಾಣಿಸಿದರು.


ಮೂವತ್ತು ಮಂದಿ ಭಟರಲ್ಲಿ ಶೂರನೂ ಮುಖ್ಯಸ್ಥನೂ ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್ ಯೋಹಾನಾನ್ ಯೋಜಾಬಾದರು,


ಎಲ್ಲಾ ಯೆಹೂದ್ಯರೂ ಅವರ ಹೆಂಡತಿಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು