Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:15 - ಕನ್ನಡ ಸತ್ಯವೇದವು J.V. (BSI)

15 ಅವನು - ಎಲ್ಲಾ ಯೆಹೂದ್ಯರೇ, ಯೆರೂಸಲೇವಿುನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವದನ್ನು ಕೇಳಿರಿ! ಈ ಮಹಾಸಮೂಹದ ನಿವಿುತ್ತವಾಗಿ ಕಳವಳಗೊಳ್ಳಬೇಡಿರಿ, ಹೆದರಬೇಡಿರಿ, ಯುದ್ಧವು ನಿಮ್ಮದಲ್ಲ, ದೇವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಭೆಯ ಮಧ್ಯದಲ್ಲಿ ನಿಂತುಕೊಂಡು ಯೆಹಜೀಯೇಲನು ಅವರಿಗೆ, “ರಾಜನಾದ ಯೆಹೋಷಾಫಾಟನೇ, ನನ್ನ ಮಾತನ್ನು ಕೇಳು. ಜೆರುಸಲೇಮಿನಲ್ಲಿಯೂ ಯೆಹೂದದ ರಾಜ್ಯದಲ್ಲಿಯೂ ವಾಸಿಸುವ ಸರ್ವಜನರೇ, ನನ್ನ ಮಾತನ್ನು ಕೇಳಿರಿ. ಯೆಹೋವನು ನಿಮಗೆ ಹೀಗೆನ್ನುತ್ತಾನೆ: ‘ಆ ದೊಡ್ಡ ಸೈನ್ಯಕ್ಕೆ ಹೆದರಿ ಚಿಂತೆಗೊಳಗಾಗಬೇಡಿ. ಯಾಕೆಂದರೆ ಯುದ್ಧವು ನಿಮ್ಮದಲ್ಲ, ಅದು ದೇವರದೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:15
18 ತಿಳಿವುಗಳ ಹೋಲಿಕೆ  

ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.


ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.


ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನುಂಟುಮಾಡುವನು ಎಂದು ಹೇಳಬೇಕು.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .


ಆಗ ಯೆಹೋವನು ಯೆಹೋಶುವನಿಗೆ - ನೀನು ಅವರಿಗೆ ಹೆದರಬೇಡ; ನಾಳೆ ಇಷ್ಟೇ ಹೊತ್ತಿಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು; ಅವರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಡಬೇಕು ಅಂದನು.


ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.


ನಾಳೆ ಬೆಳಿಗ್ಗೆ ಅವರಿಗೆ ವಿರೋಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು; ಪಾಳೆಯದವರಾದರೋ ಭ್ರಾಂತರಾಗಿ ಕೂಗುತ್ತಾ ಓಡಿಹೋಗ ಪ್ರಾರಂಭಿಸಿದರು.


ಆಗ ಒಬ್ಬ ಪ್ರವಾದಿಯು ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ - ಈ ಮಹಾ ಸಮೂಹವನ್ನು ನೋಡಿದಿಯಾ; ನಾನು ಯೆಹೋವನೇ ಎಂಬದು ನಿನಗೆ ಗೊತ್ತಾಗುವಂತೆ ಈಹೊತ್ತೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು