Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:17 - ಕನ್ನಡ ಸತ್ಯವೇದವು J.V. (BSI)

17 ಈ ಸಾರಿ ನೀವು ಯುದ್ಧಮಾಡುವದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇವಿುನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ನಡಿಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:17
26 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಅವನಿಗಿರುವ ಸಹಾಯವು ಮಾಂಸದ ತೋಳು; ನಮಗಾದರೋ ನಮ್ಮ ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸವುಳ್ಳವರಾದರು.


ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು.


ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಇಸ್ರಾಯೇಲ್ಯರ ಸದಮಲಸ್ವಾವಿುಯಾಗಿರುವ ಕರ್ತನಾದ ಯೆಹೋವನು - ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವದು; ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಕೆಟ್ಟದ್ದನ್ನಲ್ಲ, ಒಳ್ಳೆಯದನ್ನು ಅನುಸರಿಸಿರಿ, ಬಾಳುವಿರಿ; ನೀವು ಅಂದುಕೊಂಡಂತೆ ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.


ಕರ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ.


ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.


ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.


ನಾಳೆ ಬೆಳಿಗ್ಗೆ ಅವರಿಗೆ ವಿರೋಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.


ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.


ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಕಡೆಯವನಾಗಿ ಯುದ್ಧಮಾಡುವನು ಎಂದು ಆಜ್ಞಾಪಿಸಿದೆನು.


ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು; ಪಾಳೆಯದವರಾದರೋ ಭ್ರಾಂತರಾಗಿ ಕೂಗುತ್ತಾ ಓಡಿಹೋಗ ಪ್ರಾರಂಭಿಸಿದರು.


ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.


ಆಗ ಒಬ್ಬ ಪ್ರವಾದಿಯು ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ - ಈ ಮಹಾ ಸಮೂಹವನ್ನು ನೋಡಿದಿಯಾ; ನಾನು ಯೆಹೋವನೇ ಎಂಬದು ನಿನಗೆ ಗೊತ್ತಾಗುವಂತೆ ಈಹೊತ್ತೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು