2 ಪೂರ್ವಕಾಲ ವೃತ್ತಾಂತ 20:19 - ಕನ್ನಡ ಸತ್ಯವೇದವು J.V. (BSI)19 ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು ಇಸ್ರಾಯೇಲ್‍ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಮಹಾಸ್ವರದಿಂದ ಕೀರ್ತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೆಹಾತ್ಯನ ಕುಲದವರಾದ ಲೇವಿಯರೂ ಕೋರಹನ ವಂಶದವರೂ ಎದ್ದುನಿಂತು ಇಸ್ರೇಲ್ ದೇವರಾದ ಯೆಹೋವನಿಗೆ ಗಟ್ಟಿಯಾದ ಸ್ವರದಿಂದ ಸ್ತುತಿಗೀತೆ ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಕೊಹಾತ್ಯರ ಮಕ್ಕಳಲ್ಲಿಯೂ, ಕೋರಹೀಯರ ಮಕ್ಕಳಲ್ಲಿರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ತುತಿಸಲು ಎದ್ದು ನಿಂತರು. ಅಧ್ಯಾಯವನ್ನು ನೋಡಿ |
[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.