Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:28 - ಕನ್ನಡ ಸತ್ಯವೇದವು J.V. (BSI)

28 ಅವರು ಸ್ವರಮಂಡಲ ಕಿನ್ನರಿ ತುತೂರಿ ಇವುಗಳೊಡನೆ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಜೆರುಸಲೇಮಿನಲ್ಲಿರುವ ಸರ್ವೇಶ್ವರನಾಲಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವರು ವಾದ್ಯಗಳನ್ನು ಬಾರಿಸುತ್ತಾ ದೇವಾಲಯವನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:28
12 ತಿಳಿವುಗಳ ಹೋಲಿಕೆ  

ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿಕಿನ್ನರಿಗಳಿಂದ ಆತನನ್ನು ಭಜಿಸಲಿ.


ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ ರಾತ್ರಿಯಲ್ಲಿ ನಿನ್ನ ಸತ್ಯತೆಯನ್ನೂ ವರ್ಣಿಸುವದು ಉಚಿತವಾಗಿದೆ.


ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಮುಂಗೊಳ್ಳುವೆನು.


ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.


ಅಧಿಕಾರಿಗಳನ್ನಾಗಿ ಆರು ಸಾವಿರ ಮಂದಿಯನ್ನೂ ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಮಂದಿಯನ್ನೂ ತಾನು ಸಿದ್ಧಮಾಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವದಕ್ಕಾಗಿ ನಾಲ್ಕು ಸಾವಿರ ಮಂದಿಯನ್ನೂ ನೇವಿುಸಿದನು.


ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತೂರಿ ಇವುಗಳ ಧ್ವನಿಯೊಡನೆ ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ದೇವರ ಮುಂದೆ ನರ್ತನ ಮಾಡುತ್ತಾ ಹೋದರು.


ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ಯೆಹೋವನ ಮುಂದೆ ನರ್ತನಮಾಡುತ್ತಾ ಹೋದರು.


ಆಮೇಲೆ ಯೆಹೂದ್ಯರೂ ಯೆರೂಸಲೇವಿುನವರೂ ಅವರ ಮುಂಗಡೆಯಲ್ಲಿ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇವಿುಗೆ ಹಿಂದಿರುಗಿದರು.


ಯೆಹೋವನು ತಾನೇ ಇಸ್ರಾಯೇಲ್ಯರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.


ಬನ್ನಿರಿ, ಯೆಹೋವನಿಗೆ ಉತ್ಸಾಹ ಧ್ವನಿಗೈಯುವಾ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು