Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:4 - ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ಜನರೆಲ್ಲಾ ಯೆಹೋವನನ್ನು ವಿಚಾರಿಸಲು ಒಟ್ಟಾಗಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:4
13 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ ಯೆಹೂದದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಸ್ವದೇಶವಾಗಿ ಮಾಡಿಕೊಳ್ಳುವರು.


ಅವನು ಯೆಹೂದದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇವಿುಸಿ ಅವರಿಗೆ -


ಯೆಹೂದ್ಯರೂ ಯೆರೂಸಲೇವಿುನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ ಯೆಹೋಷಾಫಾಟನು ಅದರ ಮುಂಗಡೆಯಲ್ಲಿ ನಿಂತು -


ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.


ನಾಚಿಕೆಗೇಡಿಯ ಜನಾಂಗದವರೇ, ತೀರ್ಪು ಫಲಿಸುವದರೊಳಗೆ ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವದಕ್ಕೆ ಮುಂಚೆ, ಯೆಹೋವನ ಸಿಟ್ಟಿನ ದಿನವು ನಿಮ್ಮನ್ನು ಮುಟ್ಟುವದಕ್ಕೆ ಮೊದಲು ಸೇರಿಬನ್ನಿರಿ, ಕೂಡಿಕೊಳ್ಳಿರಿ;


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು.


ಇಸ್ರಾಯೇಲ್ಯರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ದರ್ಶನವನ್ನು ಬಯಸುವವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ಯಜ್ಞವರ್ಪಿಸುವದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇವಿುಗೆ ಬಂದರು.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ - ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೇಳಿಕೊಳ್ಳಬೇಕೆಂದು ಪ್ರಕಟಿಸಿದೆನು.


ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಮಾಡುವದೇನು?


ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು