Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:9 - ಕನ್ನಡ ಸತ್ಯವೇದವು J.V. (BSI)

9 ತಮ್ಮ ಮೇಲೆ ಖಡ್ಗವಿಧಿ ಘೋರವ್ಯಾಧಿ ಕ್ಷಾಮ ಮೊದಲಾದ ಆಪತ್ತುಗಳು ಬರುವಾಗ ತಾವು ನಿನ್ನ ನಾಮಮಹತ್ತು ಇರುವ ಈ ಆಲಯದ ಮುಂದೆಯೂ ನಿನ್ನ ಮುಂದೆಯೂ ನಿಂತು ತಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತಮ್ಮ ಮೇಲೆ ಖಡ್ಗವಿಧಿ, ಘೋರವ್ಯಾಧಿ, ಕ್ಷಾಮಡಾಮರ, ಮೊದಲಾದ ಆಪತ್ತುಗಳು ಬರುವಾಗ, ನಿಮ್ಮ ನಾಮಮಹಿಮೆ ಇರುವ ಈ ಆಲಯದ ಮುಂದೆಯೂ ನಿಮ್ಮ ಮುಂದೆಯೂ ನಿಂತು, ತಮ್ಮ ಇಕ್ಕಟ್ಟಿನಲ್ಲಿ ನಿಮಗೆ ಮೊರೆ ಇಡುವುದಾದರೆ ನೀವು ಆಲಿಸಿ ರಕ್ಷಿಸುವಿರಿ ಎಂದುಕೊಂಡರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು, ‘ನಮಗೆ ಖಡ್ಗ, ಕಾಯಿಲೆ, ಬರ, ಶಿಕ್ಷೆಗಳಿಂದ ಸಂಕಷ್ಟ ಉಂಟಾದರೆ ನಾವು ನಿನ್ನ ಮತ್ತು ನಿನ್ನ ಆಲಯದೆದುರು ನಿಂತು ನಿನಗೆ ಮೊರೆಯಿಡುವಾಗ ನೀನು ನಮ್ಮ ಮೊರೆಯನ್ನು ಕೇಳಿ ನಮಗೆ ಸಹಾಯ ಮಾಡುವೆ. ನಿನ್ನ ಹೆಸರು ಈ ಆಲಯದ ಮೇಲಿದೆ’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ‘ನಿಮ್ಮ ಹೆಸರು ಈ ಆಲಯದಲ್ಲಿರುವುದರಿಂದ ಖಡ್ಗವೂ ನ್ಯಾಯತೀರಿಸುವ ಶಿಕ್ಷೆಯೂ, ಘೋರವ್ಯಾಧಿಯೂ ಬರವೇನಾದರೂ ನಮ್ಮ ಮೇಲೆ ಬಂದರೆ, ನಾವು ಈ ಆಲಯದ ಮುಂದೆಯೂ, ನಿಮ್ಮ ಸಮ್ಮುಖದಲ್ಲಿಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿಮ್ಮನ್ನು ಕೂಗುವಾಗ, ನೀವು ಕೇಳಿ ರಕ್ಷಿಸುವಿರಿ,’ ಎಂದು ಹೇಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:9
13 ತಿಳಿವುಗಳ ಹೋಲಿಕೆ  

ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.


ತಮ್ಮ ಪಾಪಗಳ ಸಲುವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಎತ್ತಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡುವದಾದರೆ


ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು; ಆತನಿಗೆ ಅವಿಧೇಯರಾಗಿರಬಾರದು; ಅವಿಧೇಯರಾದರೆ ನಿಮ್ಮನ್ನು ಕ್ಷವಿುಸಲಾರನು; ನನ್ನ ನಾಮಮಹಿಮೆ ಆತನಲ್ಲಿ ಇರುವದು.


ಅವರು ಈ ದೇಶದಲ್ಲಿ ಇಳುಕೊಂಡು ಇದರಲ್ಲಿ ನಿನ್ನ ಹೆಸರಿಗೋಸ್ಕರ ಪವಿತ್ರಾಲಯವನ್ನು ಕಟ್ಟಿ -


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.


ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವ್ಯಾಧಿಯಿಂದಲೂ ತಪ್ಪಿಸುವವನು ಆತನೇ.


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.


ಆತನು - ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ನಾನು ಬರಮಾಡಿದ್ದು ಮೊದಲುಗೊಂಡು ಇಸ್ರಾಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ನನ್ನ ನಾಮದ ನಿವಾಸಕ್ಕೋಸ್ಕರ ಆಲಯಸ್ಥಾನವನ್ನಾಗಿ ಆರಿಸಿಕೊಂಡಿರಲಿಲ್ಲ; ನನ್ನ ಪ್ರಜೆಯಾದ ಇಸ್ರಾಯೇಲ್ಯರ ಪ್ರಭುವಾಗುವದಕ್ಕಾಗಿ ಯಾವನೊಬ್ಬ ಪುರುಷನನ್ನು ಆರಿಸಿಕೊಂಡದ್ದೂ ಇಲ್ಲ.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು