2 ಪೂರ್ವಕಾಲ ವೃತ್ತಾಂತ 21:10 - ಕನ್ನಡ ಸತ್ಯವೇದವು J.V. (BSI)10 ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಂದಿನಿಂದ ಇಂದಿನ ತನಕವೂ ಎದೋಮ್ ರಾಜ್ಯವು ಯೆಹೂದರಾಜ್ಯಕ್ಕೆ ಒಳಗಾಗಲೇ ಇಲ್ಲ. ಲಿಬ್ನ ಪಟ್ಟಣದ ಜನರೂ ಯೆಹೋರಾಮನಿಗೆ ಎದುರುನಿಂತರು. ತನ್ನ ಪೂರ್ವಿಕರು ಆರಾಧಿಸುತ್ತಿದ್ದ ದೇವರಾದ ಯೆಹೋವನನ್ನು ಯೆಹೋರಾಮನು ತೊರೆದುಬಿಟ್ಟಿದ್ದರಿಂದ ಇವೆಲ್ಲಾ ಅವನಿಗೆ ಸಂಭವಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಅಧ್ಯಾಯವನ್ನು ನೋಡಿ |