2 ಪೂರ್ವಕಾಲ ವೃತ್ತಾಂತ 21:16 - ಕನ್ನಡ ಸತ್ಯವೇದವು J.V. (BSI)16 ಯೆಹೋವನು ಫಿಲಿಷ್ಟಿಯರನ್ನೂ ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಎಬ್ಬಿಸಿದ್ದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ಫಿಲಿಷ್ಟಿಯರನ್ನೂ ಸುಡಾನಿನ ನೆರೆಯವರಾದ ಅರೇಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು. ಅಧ್ಯಾಯವನ್ನು ನೋಡಿ |
ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.