Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:4 - ಕನ್ನಡ ಸತ್ಯವೇದವು J.V. (BSI)

4 ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡಕೊಂಡು ತನ್ನ ಆಳಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು, ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲ ಸಹೋದರರನ್ನೂ ಕೆಲವು ಮಂದಿ ಇಸ್ರಯೇಲ್ ಪ್ರಮುಖರನ್ನೂ ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನನ್ನು ಬಲಪಡಿಸಿಕೊಂಡನು. ನಂತರ ತನ್ನ ತಮ್ಮಂದಿರನ್ನೆಲ್ಲಾ ಖಡ್ಗದಿಂದ ಹತಿಸಿದನು. ಮಾತ್ರವಲ್ಲದೆ ಇಸ್ರೇಲಿನ ಕೆಲವು ಪ್ರಧಾನರನ್ನು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ, ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ, ಇಸ್ರಾಯೇಲಿನ ಪ್ರಧಾನರಲ್ಲಿ ಕೆಲವರನ್ನೂ ಖಡ್ಗದಿಂದ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:4
10 ತಿಳಿವುಗಳ ಹೋಲಿಕೆ  

ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು ದೇಶದೊಳಗೆ ನುಗ್ಗಿ ಅರಮನೆಯಲ್ಲಿ ಸಿಕ್ಕಿದ ಎಲ್ಲಾ ಸೊತ್ತನ್ನೂ ಅರಸನ ಹೆಂಡರುಮಕ್ಕಳನ್ನೂ ಸೆರೆಯೊಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ.


ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.


ಯೇಹುವು ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.


ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಪ್ರೇರಿಸಿದಿ; ಮತ್ತು ನಿನ್ನ ತಂದೆಯ ಕುಟುಂಬಕ್ಕೆ ಸೇರಿ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದಿ;


ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.


ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು