2 ಪೂರ್ವಕಾಲ ವೃತ್ತಾಂತ 22:5 - ಕನ್ನಡ ಸತ್ಯವೇದವು J.V. (BSI)5 ಅವರ ಪ್ರೇರಣೆಯಿಂದ ಇಸ್ರಾಯೇಲ್ಯರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನು ಆ ಗಾಯಗಳನ್ನು ಮಾಯಿಸಿಕೊಳ್ಳುವದಕ್ಕಾಗಿ ಇಜ್ರೇಲಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಪ್ರೇರಣೆಯಿಂದಲೇ ಇಸ್ರಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಸಿರಿಯಾದ ಅರಸ ಹಜಾಯೇಲನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಸಿರಿಯಾದವರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಹಾಬನ ಕುಟುಂಬದವರ ಸಲಹೆಯ ಮೇರೆಗೆ ಅಹಜ್ಯನು ರಾಜನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನೊಂದಿಗೆ ಯುದ್ಧಮಾಡಲು ರಾಮೋತ್‌ಗಿಲ್ಯಾದ್ ಎಂಬ ಪಟ್ಟಣಕ್ಕೆ ಹೋದನು. ಯೋರಾಮನು ಇಸ್ರೇಲರ ಅರಸನಾದ ಅಹಾಬನ ಮಗನು. ಅರಾಮ್ಯರು ಯುದ್ಧದಲ್ಲಿ ಯೋರಾಮನನ್ನು ಗಾಯಗೊಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು. ಅಧ್ಯಾಯವನ್ನು ನೋಡಿ |