2 ಪೂರ್ವಕಾಲ ವೃತ್ತಾಂತ 23:10 - ಕನ್ನಡ ಸತ್ಯವೇದವು J.V. (BSI)10 ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಯುಧಪಾಣಿಗಳಾದ ಎಲ್ಲ ಜನರನ್ನು ಅರಸನ ಸುತ್ತಲು ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಬಲಿಪೀಠದವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೇರಿಬಂದವರು ಎಲ್ಲೆಲ್ಲಿ ನಿಲ್ಲಬೇಕೆಂದು ಯೆಹೋಯಾದನು ಸೂಚಿಸಿದನು. ಪ್ರತಿಯೊಬ್ಬರ ಕೈಯಲ್ಲಿ ಆಯುಧಗಳಿದ್ದವು. ದೇವಾಲಯದ ಎಡಬಲಗಳಲ್ಲಿ ಜನರು ನಿಂತಿದ್ದರು. ಯಜ್ಞವೇದಿಕೆಯ ಬಳಿ, ದೇವಾಲಯದ ಬಳಿ ಮತ್ತು ಅರಸನ ಬಳಿಯಲ್ಲಿ ಅವರು ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು. ಅಧ್ಯಾಯವನ್ನು ನೋಡಿ |