2 ಪೂರ್ವಕಾಲ ವೃತ್ತಾಂತ 23:11 - ಕನ್ನಡ ಸತ್ಯವೇದವು J.V. (BSI)11 ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದರು. ಕೂಡಲೆ ಜನರು - ಅರಸನು ಚಿರಂಜೀವಿಯಾಗಿರಲಿ ಎಂದು ಹರಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡುಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು. ಅಧ್ಯಾಯವನ್ನು ನೋಡಿ |