Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:3 - ಕನ್ನಡ ಸತ್ಯವೇದವು J.V. (BSI)

3 ಕೂಡಿಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಯೆಹೋಯಾದನು ಅವರಿಗೆ - ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅರಸನಾಗತಕ್ಕವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇವರೆಲ್ಲಾ ದೇವಾಲಯದಲ್ಲಿ ರಾಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತತಿಯವರಿಗೆ ಮಾಡಿದ ವಾಗ್ದಾನದ ಪ್ರಕಾರ ಅರಸನಾಗತಕ್ಕವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:3
14 ತಿಳಿವುಗಳ ಹೋಲಿಕೆ  

ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ.


ಇಸ್ರಾಯೇಲ್‍ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ - ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವೆನು ಎಂಬದಾಗಿ ವಾಗ್ದಾನಮಾಡಿದಿಯಲ್ಲಾ, ಅದನ್ನು ನೆರವೇರಿಸು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಮತ್ತು ಇಸ್ರಾಯೇಲ್ಯರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡಿಸುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವದಾಗಿ ಆತನಿಗೆ ಪ್ರಮಾಣಮಾಡಿದರು. ಇದಲ್ಲದೆ ರಾಜಪ್ರಜೆಗಳಿಗೂ ಒಡಂಬಡಿಕೆಯಾಯಿತು.


ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು.


ಅವನ ಸಂತತಿಯು ಶಾಶ್ವತವಾಗಿ ಇರುವದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು


ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವದು.


ಅನಂತರ ಯೆಹೋಯಾದನು ಎಲ್ಲಾ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.


ಆಗ ಅರಸನಾದ ದಾವೀದನು ತನ್ನ ಹತ್ತಿರ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನಿಂದಾದ ಆಜ್ಞೆಗನುಸಾರವಾಗಿ ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.


ಇಸ್ರಾಯೇಲ್ಯರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು; ಇಸ್ರಾಯೇಲ್‍ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕೂತುಕೊಳ್ಳುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು