2 ಪೂರ್ವಕಾಲ ವೃತ್ತಾಂತ 23:6 - ಕನ್ನಡ ಸತ್ಯವೇದವು J.V. (BSI)6 ಯಾಜಕರೂ ಸೇವೆಯಲ್ಲಿರುವ ಲೇವಿಯರೂ ಹೊರತಾಗಿ ಯಾರೂ ಯೆಹೋವನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಆಜ್ಞಾನುಸಾರವಾಗಿ ಹೊರಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯಾರನ್ನೂ ದೇವಾಲಯದೊಳಕ್ಕೆ ಬಿಡಬಾರದು. ಶುದ್ಧಮಾಡಲ್ಪಟ್ಟ ಯಾಜಕರು ಮತ್ತು ಲೇವಿಯರು ಮಾತ್ರ ದೇವರ ಸೇವೆಮಾಡುವದಕ್ಕಾಗಿ ಆಲಯದೊಳಗೆ ಬರುವರು. ಉಳಿದವರು ಯೆಹೋವನು ತಮಗೆ ಕೊಟ್ಟ ಕೆಲಸಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು. ಅಧ್ಯಾಯವನ್ನು ನೋಡಿ |