Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:8 - ಕನ್ನಡ ಸತ್ಯವೇದವು J.V. (BSI)

8 ಲೇವಿಯರೂ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು [ಸಬ್ಬತ್ ದಿವಸದಲ್ಲಿ ಸೇವಾ ವಿಮುಕ್ತರಾದ] ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದದರಿಂದ ಪ್ರತಿಯೊಬ್ಬನು ಸಬ್ಬತ್‍ದಿವಸ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಕೂಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್‍ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್‍ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಜಕನಾದ ಯೆಹೋಯಾದನು ಆಜ್ಞಾಪಿಸಿದಂತೆ ಲೇವಿಯರೂ ಯೆಹೂದದ ಜನರೂ ಮಾಡಿದರು. ಆದ್ದರಿಂದ ಪ್ರತಿಯೊಬ್ಬ ಸೇನಾಧಿಪತಿಯು ತನ್ನ ಕೈ ಕೆಳಗೆ ಸಬ್ಬತ್‌ದಿನದಲ್ಲಿ ಕೆಲಸಮಾಡಲು ಹೋಗುತ್ತಿದ್ದವರನ್ನು ಮತ್ತು ಸಬ್ಬತ್ ದಿನದ ಕೆಲಸ ಮುಗಿಸಿಕೊಂಡು ಬರುತ್ತಿದ್ದವರನ್ನು ಕೂಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:8
7 ತಿಳಿವುಗಳ ಹೋಲಿಕೆ  

ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್‍ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರಕೊಂಡು ಅವನ ಬಳಿಗೆ ಬಂದರು.


ಗ್ರಾಮಗಳಲ್ಲಿದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸಮಾಡುವದಕ್ಕೋಸ್ಕರ ಸರತಿಯ ಮೇಲೆ ಏಳೇಳು ದಿವಸ ಬರಬೇಕಾಯಿತು.


ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು ಎಂದು ಹೇಳಿದನು.


ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ ಗುರಾಣಿ ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟು


ಹದಿನೆಂಟನೆಯವನು ಹನಾನೀ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.


ಶೆಲೋಮೋತನೂ ಅವನ ಸಹೋದರರೂ ಪ್ರತಿಷ್ಠಿತವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರಬಂಧುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು