Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:10 - ಕನ್ನಡ ಸತ್ಯವೇದವು J.V. (BSI)

10 ಎಲ್ಲಾ ಪ್ರಭುಗಳೂ ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಲ್ಲ ಮುಖ್ಯಸ್ಥರೂ ಜನಸಾಮಾನ್ಯರೂ ಸಂತೋಷದಿಂದ, ಬೇಕಾಗುವಷ್ಟು ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲ್ಲಾ ನಾಯಕರೂ ಜನರೂ ಸಂತೋಷದಿಂದ ತಮ್ಮ ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕತೊಡಗಿದರು. ಆ ಪೆಟ್ಟಿಗೆ ತುಂಬಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:10
7 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.


ಆ ಸಭೆಗಳವರು ಬಹಳ ಹಿಂಸೆ ತಾಳುವವರಾದರೂ ಮತ್ತು ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.


ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬದಾಗಿ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಪ್ರಕಟಿಸಿದನು.


ಪೆಟ್ಟಿಗೆಯಲ್ಲಿ ತುಂಬಾ ಹಣವಿರುತ್ತದೆಂದು ಕಂಡುಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು ರಾಜಕೀಯ ಅಧ್ಯಕ್ಷರ ಬಳಿಗೆ ತರುವರು. ಆಗ ಅರಸನ ಲೇಖಕನೂ ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವುಮಾಡಿ ತಿರಿಗಿ ಅದರ ಸ್ಥಳದಲ್ಲಿಡುವರು. ಅವರು ಪ್ರತಿದಿನವೂ ಈ ಪ್ರಕಾರ ಮಾಡುತ್ತಿದ್ದದರಿಂದ ಬಹಳ ಹಣವನ್ನು ಕೂಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು