2 ಪೂರ್ವಕಾಲ ವೃತ್ತಾಂತ 24:11 - ಕನ್ನಡ ಸತ್ಯವೇದವು J.V. (BSI)11 ಪೆಟ್ಟಿಗೆಯಲ್ಲಿ ತುಂಬಾ ಹಣವಿರುತ್ತದೆಂದು ಕಂಡುಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು ರಾಜಕೀಯ ಅಧ್ಯಕ್ಷರ ಬಳಿಗೆ ತರುವರು. ಆಗ ಅರಸನ ಲೇಖಕನೂ ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವುಮಾಡಿ ತಿರಿಗಿ ಅದರ ಸ್ಥಳದಲ್ಲಿಡುವರು. ಅವರು ಪ್ರತಿದಿನವೂ ಈ ಪ್ರಕಾರ ಮಾಡುತ್ತಿದ್ದದರಿಂದ ಬಹಳ ಹಣವನ್ನು ಕೂಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು, ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡುಬಂದಾಗಲೆಲ್ಲಾ ಲೇವಿಯರು ಪೆಟ್ಟಿಗೆಯನ್ನು ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಕಾರ್ಯದರ್ಶಿಯೂ ಮಹಾಯಾಜಕನ ಪ್ರತಿನಿಧಿಯೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದರ ಸ್ಥಳದಲ್ಲಿಡುತ್ತಿದ್ದರು. ಅವರು ಪ್ರತಿದಿನವೂ ಈ ಪ್ರಕಾರ ಮಾಡುತ್ತಿದ್ದುದರಿಂದ ಬಹಳ ಹಣವನ್ನು ಸಂಗ್ರಹಿಸಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಲೇವಿಯರು ಅದನ್ನು ಅರಸನ ಅಧಿಕಾರಿಗಳ ಬಳಿಗೆ ತೆಗೆದುಕೊಂಡು ಹೋಗುತ್ತಿದ್ದರು; ರಾಜನ ಕಾರ್ಯದರ್ಶಿ ಮತ್ತು ಯಾಜಕರ ಮುಖಂಡನು ಬಂದು ಅದರಲ್ಲಿದ್ದ ಹಣವನ್ನು ತೆಗೆದುಕೊಂಡು ಮತ್ತೆ ಆ ಪೆಟ್ಟಿಗೆಯನ್ನು ಮುಂಚಿನ ಸ್ಥಳದಲ್ಲಿ ಇಡುತ್ತಿದ್ದರು. ಹೀಗೆ ಅವರು ಮಾಡುತ್ತಾ ಬಂದಕಾರಣ ಬಹಳ ಹಣ ಸಂಗ್ರಹಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಕಛೇರಿಗೆ ತಂದಾಗಲೆಲ್ಲಾ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ, ಅರಸನ ಕಾರ್ಯದರ್ಶಿಯೂ, ಮುಖ್ಯಯಾಜಕನ ಪರಿಚಾರಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ, ತೆಗೆದುಕೊಂಡು ತಿರುಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಅಧ್ಯಾಯವನ್ನು ನೋಡಿ |