Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:15 - ಕನ್ನಡ ಸತ್ಯವೇದವು J.V. (BSI)

15 ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರುಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು. ಸಾಯುವಾಗ ಅವನಿಗೆ ನೂರಮೂವತ್ತು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋಯಾದನು ವೃದ್ಧನಾದನು. ಅವನು ದೀರ್ಘಕಾಲ ಬಾಳಿ ತೀರಿಹೋದನು. ಅವನು ಸಾಯುವಾಗ ಅವನಿಗೆ ನೂರ ಮೂವತ್ತು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:15
10 ತಿಳಿವುಗಳ ಹೋಲಿಕೆ  

ದೀರ್ಘಾಯುಷ್ಯವನ್ನು ಅನುಗ್ರಹಿಸಿ ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಸುಗ್ಗೀಕಾಲದಲ್ಲಿ ತೆನೆಸಿವುಡು [ಮನೆಗೆ] ಸೇರುವಂತೆ ನೀನು ವೃದ್ಧಾಪ್ಯದಲ್ಲಿ ಸಮಾಧಿಗೆ ಸೇರುವಿ.


ದಾವೀದನು ಮುಪ್ಪಿನ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿ


ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ಕೆಲಸ ತೀರಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ ಯಜ್ಞಾರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮ ಸಮರ್ಪಣೆಯಾಗುತ್ತಿತ್ತು.


ಅವನು ಇಸ್ರಾಯೇಲ್ಯರ ವಿಷಯದಲ್ಲಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು.


ಯೆಹೋಯಾದನು ಅವನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಕೊಟ್ಟನು; ಅವನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು