2 ಪೂರ್ವಕಾಲ ವೃತ್ತಾಂತ 24:20 - ಕನ್ನಡ ಸತ್ಯವೇದವು J.V. (BSI)20 ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.