2 ಪೂರ್ವಕಾಲ ವೃತ್ತಾಂತ 24:23 - ಕನ್ನಡ ಸತ್ಯವೇದವು J.V. (BSI)23 ವರುಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರೋಧವಾಗಿ ಹೊರಟಿತು. ಆ ಸೈನ್ಯದವರು ಯೆಹೂದದೇಶದೊಳಗೆ ನುಗ್ಗಿ ಯೆರೂಸಲೇವಿುಗೆ ಬಂದು ಇಸ್ರಾಯೇಲ್ಯರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ಬಂತು. ಅವರು ಯೆಹೂದದೇಶ ಮತ್ತು ಜೆರುಸಲೇಮಿನ ಮೇಲೆ ದಾಳಿ ಮಾಡಿ ಎಲ್ಲಾ ನಾಯಕರನ್ನು ಸಂಹರಿಸಿದರು. ಅಲ್ಲಿದ್ದ ಬೆಲೆಬಾಳುವ ಎಲ್ಲಾ ವಸ್ತುಗಳನ್ನು ದಮಸ್ಕದ ಅರಸನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿ |