Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:27 - ಕನ್ನಡ ಸತ್ಯವೇದವು J.V. (BSI)

27 ಅವನ ಮಕ್ಕಳ ವಿವರವೂ ಅವನಿಗೆ ವಿರುದ್ಧವಾಗಿ ಹೇಳಲ್ಪಟ್ಟ ಅನೇಕ ದೈವೋಕ್ತಿಗಳೂ ದೇವಾಲಯದ ಜೀರ್ಣೋದ್ಧಾರವೃತ್ತಾಂತವೂ ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನ ಮಕ್ಕಳ ವಿವರ, ಅವನಿಗೆ ವಿರುದ್ಧ ಹೇಳಲಾದ ಅನೇಕ ದೈವೋಕ್ತಿಗಳು ಹಾಗು ದೇವಾಲಯದ ದುರಸ್ತಿಯ ವೃತ್ತಾಂತ ಇವು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವಾಷನ ಮಕ್ಕಳ ಚರಿತ್ರೆ, ಅವನ ವಿರುದ್ಧವಾಗಿ ಹೇಳಿದ ಪ್ರವಾದನೆಗಳು, ಅವನು ದೇವಾಲಯವನ್ನು ಸರಿಪಡಿಸಿದ ವಿಷಯಗಳು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆಯಲ್ಪಟ್ಟಿದೆ. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:27
10 ತಿಳಿವುಗಳ ಹೋಲಿಕೆ  

ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಯೆರೂಸಲೇವಿುನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ.


ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡಿಸುವವರಿಗೆ ಒಪ್ಪಿಸಿದರು. ಇವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು.


ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆದಿರುತ್ತದೆ.


ಆಸನ ಪೂರ್ವೋತ್ತರಚರಿತ್ರೆಯು ಯೆಹೂದ ಮತ್ತು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಬರೆದಿರುತ್ತದೆ.


ಅಬೀಯನ ಉಳಿದ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ವ್ಯಾಖ್ಯಾನದಲ್ಲಿ ಬರೆದಿರುತ್ತವೆ.


ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯು ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆ, ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.


ಇವನ ಮಗನು ಯೆಹೋವಾಷ್; ಇವನ ಮಗನು ಅಮಚ್ಯ; ಇವನ ಮಗನು ಅಜರ್ಯ; ಇವನ ಮಗನು ಯೋತಾಮ್;


ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೇರನ ಮಗನಾದ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗಟ್ಟದ ದಾರಿಯಲ್ಲಿರುವ ವಿುಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಕುಟುಂಬಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.


ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯ ಎಂಬ ಯೆಹೂದರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.


ಅಮ್ಮೋನ್ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರೀತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬವರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು