Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:3 - ಕನ್ನಡ ಸತ್ಯವೇದವು J.V. (BSI)

3 ಯೆಹೋಯಾದನು ಅವನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಕೊಟ್ಟನು; ಅವನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೆಹೋಯಾದನು ಅರಸನಿಗೆ ಇಬ್ಬರು ಕನ್ಯೆಯರನ್ನು ಮದುವೆಮಾಡಿ ಕೊಟ್ಟನು; ಅವರಿಂದ ಗಂಡು ಹೆಣ್ಣು ಮಕ್ಕಳು ಜನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋಯಾದನು ಅವನಿಗೆ ಇಬ್ಬರು ಕನ್ನಿಕೆಯರನ್ನು ಮದುವೆ ಮಾಡಿಸಿದನು. ಅವನು ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:3
7 ತಿಳಿವುಗಳ ಹೋಲಿಕೆ  

ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರುಷದವನಾಗಿದ್ದನು.


ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತೆಗೆದುಕೊಳ್ಳಬೇಕು. ಹಾಗೆ ತೆಗೆದುಕೊಳ್ಳುತ್ತೇನೆಂಬದಕ್ಕೆ ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಭೂಲೋಕಪರಲೋಕಗಳ ದೇವರಾಗಿರುವ ಯೆಹೋವನ ಮೇಲೆ ಪ್ರಮಾಣಮಾಡಬೇಕು ಎಂದು ಹೇಳಿದನು.


ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿ ಐಗುಪ್ತದೇಶದಿಂದ ಕನ್ನಿಕೆಯನ್ನು ತರಿಸಿ ಮದುವೆಮಾಡಿಸಿದಳು.


ಲೆಮೆಕನು ಆದಾ ಚಿಲ್ಲಾ ಎಂಬ ಇಬ್ಬರು ಹೆಂಡರನ್ನು ಮಾಡಿಕೊಂಡನು.


ಅವನು ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.


ಕಾಲಾಂತರದಲ್ಲಿ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರಮಾಡುವದಕ್ಕೆ ಮನಸ್ಸುಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು