Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:6 - ಕನ್ನಡ ಸತ್ಯವೇದವು J.V. (BSI)

6 ಆದರೂ ಲೇವಿಯರು ಅವಸರ ಪಡಲಿಲ್ಲ. ಆದದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರಿಸಿ ಅವನಿಗೆ - ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲಾ ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇವಿುನವರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಅರಸನಾದ ಯೆಹೋವಾಷನು ಮಹಾಯಾಜಕನಾದ ಯೆಹೋಯಾದನನ್ನು ಕರೆದು, “ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಯೆಹೂದ ಮತ್ತು ಜೆರುಸಲೇಮಿನ ಜನರಿಂದ ಲೇವಿಯರು ಸಂಗ್ರಹಿಸಿಕೊಂಡು ಬರಲು ನೀನೇಕೆ ಅವರನ್ನು ಒತ್ತಾಯಿಸಲಿಲ್ಲ? ಮೋಶೆಯೂ ಇಸ್ರೇಲರೂ ಆ ಹಣವನ್ನು ಪವಿತ್ರ ಗುಡಾರಕ್ಕಾಗಿ ಉಪಯೋಗಿಸುತ್ತಿರಲಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:6
7 ತಿಳಿವುಗಳ ಹೋಲಿಕೆ  

ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ದೇವದರ್ಶನಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತಾಡಿದವನು - ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ನೇವಿುಸಿದ್ದನು.


ಆಗ ಯೋವಾಬನು ಅರಸನಿಗೆ - ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಗಳನ್ನು ಈಗ ಇರುವದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ ಅಂದನು.


ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.


ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬದಾಗಿ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು