Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:11 - ಕನ್ನಡ ಸತ್ಯವೇದವು J.V. (BSI)

11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರಕೊಂಡು ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ಕಣಿವೆಗೆ ಹೋಗಿ, ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಮಚ್ಯನು ಧೈರ್ಯಗೊಂಡು ತನ್ನ ಸೈನ್ಯವನ್ನು ಎದೋಮ್ ರಾಜ್ಯದ ಉಪ್ಪಿನ ಕಣಿವೆಗೆ ನಡಿಸಿದನು. ಆ ಸ್ಥಳದಲ್ಲಿ ಅವನ ಸೈನಿಕರು ಸೇಯೀರಿನ ಹತ್ತು ಸಾವಿರ ಮಂದಿಯನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:11
7 ತಿಳಿವುಗಳ ಹೋಲಿಕೆ  

ಇದಲ್ಲದೆ ಉಪ್ಪಿನತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಹೊಡೆದು ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ದೇವರೇ, ಕೋಪದಿಂದ ನಮ್ಮನ್ನು ತಳ್ಳಿಕೆಡವಿ ಬಿಟ್ಟಿದ್ದೀ; ನಮ್ಮನ್ನು ಎತ್ತಿ ನಿಲ್ಲಿಸು.


ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದು ಬಂದು ಅಂದಿನಿಂದ ಬಹುಖ್ಯಾತಿವಂತನಾದನು.


ಆಗ ಅಮಚ್ಯನು ಎಫ್ರಾಯೀಮ್ಯರಿಂದ ಬಂದ ಸೈನಿಕರನ್ನು ಬೇರೆ ಮಾಡಿ ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹುಕೋಪಗೊಂಡು ಬಲುಸಿಟ್ಟಿನಿಂದ ತಮ್ಮ ದೇಶಕ್ಕೆ ಹೋದರು.


ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು ಕಡಿದಾದ ಬಂಡೆಯ ತುದಿಗೆ ಒಯ್ದು ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.


ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ - ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಭಕ್ತಿಯನ್ನೇಕೆ ಇಟ್ಟಿದ್ದೀ ಎಂದು ಹೇಳಿಸಿದನು.


ಉನ್ನತಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ - ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು ಅಂದುಕೊಳ್ಳುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು