Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:12 - ಕನ್ನಡ ಸತ್ಯವೇದವು J.V. (BSI)

12 ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು ಕಡಿದಾದ ಬಂಡೆಯ ತುದಿಗೆ ಒಯ್ದು ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೂದ್ಯರು ಬೇರೆ ಹತ್ತು ಸಾವಿರಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದ ಸೈನಿಕರು ಸೇಯೀರಿನ ಹತ್ತುಸಾವಿರ ಮಂದಿಯನ್ನು ಸೆರೆಹಿಡಿದರು. ಅವರನ್ನು ಒಂದು ಕಡಿದಾದ ಬೆಟ್ಟದ ಬದಿಗೊಯ್ದು ಅಲ್ಲಿಂದ ಅವರನ್ನು ಕೆಳಕ್ಕೆ ದೂಡಿದರು. ಅವರು ಕೆಳಗೆ ಬಂಡೆಗೆ ಅಪ್ಪಳಿಸಿದಾಗ ಅವರ ದೇಹಗಳು ಚೂರುಚೂರಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದ್ಯರು ಸೆರೆಯಾಗಿ ಒಯ್ದು, ಬಂಡೆಯ ಶಿಖರಕ್ಕೆ ಅವರನ್ನು ಕರೆದುಕೊಂಡು ಹೋಗಿ, ಅಲ್ಲಿಂದ ಅವರನ್ನು ದಬ್ಬಿ ಸಾಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:12
8 ತಿಳಿವುಗಳ ಹೋಲಿಕೆ  

ಈ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತಪ್ರದೇಶದವರನ್ನೂ ನೋಡು; ಇಸ್ರಾಯೇಲ್ಯರು ಐಗುಪ್ತದೇಶದಿಂದ ಬರುತ್ತಿದ್ದಾಗ ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ ಇವರನ್ನು ಸಂಹರಿಸದೆ ವಾರೆಯಾಗಿ ಹೋದರಲ್ಲಾ.


ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸಮಾಡುವದಕ್ಕೆ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇವಿುಗೆ ಬಂದನು.


ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಮಾಡುವದಕ್ಕೂ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇವಿುಗೆ ಬಂದನು.


ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರಕೊಂಡು ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.


ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದಪಟ್ಟಣಗಳ ಮೇಲೆ ಬಿದ್ದು ಮೂರು ಸಾವಿರ ಜನರನ್ನು ಕೊಂದು ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು.


ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ - ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಭಕ್ತಿಯನ್ನೇಕೆ ಇಟ್ಟಿದ್ದೀ ಎಂದು ಹೇಳಿಸಿದನು.


ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ ಜನರು ನನ್ನ ಮಾತುಗಳಿಗೆ ಕಿವಿಗೊಡುವರು; ಅವು ಅವರಿಗೆ ಚೆನ್ನಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು